ಕುಶಾಲನಗರ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ವಿ. ಸೋಮಣ್ಣ ಭೇಟಿ : ಪರೀಶಿಲನೆ

08/08/2020

ಮಡಿಕೇರಿ ಆ. 8 : ಕುಶಾಲನಗರ ಪ್ರವಾಹ ಪೀಡಿತ ಪ್ರದೇಶ ಕುವೆಂಪು ಮತ್ತು ಸಾಯಿ ಬಡಾವಣೆಗೆ ಹಾಗೂ ಕುಶಾಲನಗರ-ಕೊಪ್ಪ ಸೇತುವೆಯಲ್ಲಿ ಹರಿಯುತ್ತಿರುವ ಕಾವೇರಿ ನದಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ‌ ವಿ.ಸೋಮಣ್ಣ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಅಲ್ಲಿನ ನಿವಾಸಿಗಳ ಅಹವಾಲು‌ ಆಲಿಸಿದರು. ಬಡಾವಣೆಗಳಿಗೆ ಪ್ರವಾಹ ಉಂಟಾಗದಂತೆ ತಡೆಯುವ ನಿಟ್ಟಿನಲ್ಲಿ ಶಾಶ್ವತ ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತರಿಸಲಾಗುವುದು ವಿ.ಸೋಮಣ್ಣ ಅವರು ಹೇಳಿದರು.

ಈ ಸಂದರ್ಭ ಶಾಸಕರಾದ ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ ಇತರರು ಇದ್ದರು.