ಶಿಕ್ಷಣ ನೀತಿ ಕುರಿತು ಪ್ರಧಾನಿ ಮಾತು

08/08/2020

ನವದೆಹಲಿ ಆ.8 : ಕೇಂದ್ರ ಸರ್ಕಾರ ಜಾರಿಗೆ ತರಲಿಚ್ಛಿಸಿರುವ ನೂತನ ಶಿಕ್ಷಣ ನೀತಿ ಕುರಿತ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆಯ ಸುಧಾರಣೆಗಳ ಕುರಿತ ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶ’ವನ್ನು ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ಈ ವೇಳೆ 1986ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲಾಗಿದ್ದು, 1986ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲಾಗುತ್ತಿದ್ದು, ಅದರ ವಿವರಗಳನ್ನು ಅವರು ಉಲ್ಲೇಖಿಸಿದರು.
‘ಈ ಸಮಾವೇಶ ಅತ್ಯಂತ ಮಹತ್ವದ್ದು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ ಲಭಿಸಲಿದೆ. ಶಿಕ್ಷಣ ನೀತಿ ಸ್ಪಷ್ಟವಾಗುತ್ತ ಹೋದಂತೆ ಇದರ ಅನುಷ್ಠಾನವೂ ಖಚಿತವಾಗಿ ಆಗಲಿದೆ. ಈ ಶಿಕ್ಷಣ ನೀತಿಯ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ. ಭಾರತದ ಶಿಕ್ಷಣ ನೀತಿಯ ಬಗ್ಗೆ ಜಗತ್ತು ಮಾತನಾಡಲಾರಂಭಿಸಿದೆ. ಇದು ಆರೋಗ್ಯಪೂರ್ಣ ಚರ್ಚೆಗೆ ಅವಕಾಶ ಒದಗಿಸಿದೆ. ಯಾವುದೇ ವಲಯದವರೂ ಇದನ್ನು ಪೂರ್ವಗ್ರಹಪೀಡಿತವಾದುದು ಎಂದು ಟೀಕಿಸಿಲ್ಲ, ಪ್ರಶ್ನೆ ಮಾಡಿಲ್ಲ. ಕಳೆದ 3-4 ವರ್ಷಗಳ ಕಾಲ ಸುದೀರ್ಘ ಚರ್ಚೆ, ಲಕ್ಷಾಂತರ ಸಲಹೆ ಸೂಚನೆಗಳನ್ನು ಪರಿಶೀಲಿಸಿ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದರು.