225 ರೂ.ಗೆ ಕೋವಿಡ್-19 ಲಸಿಕೆ

August 8, 2020

ನವದೆಹಲಿ ಆ.9 : ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್-19 ಲಸಿಕೆ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ 225 ರೂ.ಗೆ ನೀಡುವುದಾಗಿ ಪ್ರಕಟಿಸಿದೆ.
ಭಾರತ ಸೇರಿದಂತೆ ಕಡಿಮೆ ಮತ್ತು ಮಧ್ಯಮ ಆದಾಯ ಹೊಂದಿರುವ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಡ್ 19 ಲಸಿಕೆಗಳನ್ನು ತಯಾರಿಸಲು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 150 ಮಿಲಿಯನ್ ಡಾಲರ್ ಹಣವನ್ನು ಒದಗಿಸುತ್ತದೆ ಎಂದು ಸೀರಮ್ ತಿಳಿಸಿದೆ.
ಅಸ್ಟ್ರಾಜೆನೆಕಾ ಪರವಾನಗಿ ಹೊಂದಿರುವ ಆಕ್ಸ್‍ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಅಭ್ಯರ್ಥಿಯು ಭಾರತ ಮತ್ತು ಇತರ ಹಲವಾರು ದೇಶಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಮುಂದುವರಿದ ಹಂತದಲ್ಲಿದೆ ಮತ್ತು 2021ರ ಮೊದಲಾರ್ಧದಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗುವ ಸಾಧ್ಯತೆಯಿದೆ.