ಮಳೆಹಾನಿ ಸಂತ್ರಸ್ತರಿಗೆ ನೆರವು ನೀಡುವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಸಹಕಾರ ನೀಡಲು ಮನವಿ

08/08/2020

ಮಡಿಕೇರಿ ಆ. 8 : ಪ್ರಾಕೃತಿ ವಿಕೋಪ ಸಂಬಂಧಿಸಿದಂತೆ ದಾನಿಗಳು ಬಟ್ಟೆ, ಬರೆ, ಇತರೆ ವಸ್ತುಗಳನ್ನು ನೀಡುವುದು ಬೇಡ, ಬದಲಾಗಿ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಕಳುಹಿಸಬಹುದಾಗಿದೆ ಎಂದು ಸಚಿವ ವಿ. ಸೋಮಣ್ಣ ಮನವಿ ಮಾಡಿದರು.
ಪರಿಹಾರ ಕೇಂದ್ರಗಳಲ್ಲಿನ ಪ್ರತಿಯೊಬ್ಬರಿಗೂ ಸಹ ಕೋವಿಡ್ ಪರೀಕ್ಷೆ ನಡೆಸಿ, ಪಾಸಿಟಿವ್ ವರದಿ ಬಂದರೆ ಆಸ್ಪತ್ರೆಗೆ ಸೇರಿಸಿ, ನೆಗೆಟಿವ್ ಬಂದವರನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರ ಕೇಂದ್ರಗಳಲ್ಲಿ ಇರಿಸಿಸುವಂತೆ ಸೂಚಿಸಿದರು.
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಜನರ ಆರೋಗ್ಯ ರಕ್ಷಣೆಯೂ ಸಹ ಮುಖ್ಯವಾಗಿದೆ. ಸರ್ಕಾರದ ಕೆಲಸ ದೇವರ ಕೆಲಸ ಎಂಬ ನಾಣ್ಣುಡಿಯಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸಬೇಕು ಎಂದರು.