ಸಾಮೂಹಿಕ ಪ್ರಾರ್ಥನೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮನವಿ

08/08/2020

ಮಡಿಕೇರಿ ಆ. 8 : ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಮಹಾಮಳೆ ಕಾಡುತ್ತಲೇ ಇದೆ. ಯಾವುದೇ ವೈಜ್ಞಾನಿಕ ಕಾರಣಗಳನ್ನು ನೀಡಿದರೂ ಪ್ರಾಕೃತಿಕ ವಿಕೋಪವನ್ನು ತಡೆಯಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಪ್ರತಿಯೊಂದು ಸಮುದಾಯವೂ ತಮ್ಮ ತಮ್ಮ ಧರ್ಮದ ಮೇಲೆ ಅಪಾರ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಆದ್ದರಿಂದ ಕೊಡಗಿನಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ನಡೆಯದಂತೆ ಎಲ್ಲಾ ಧರ್ಮೀಯರು ಏಕಕಾಲದಲ್ಲಿ ಪ್ರಾರ್ಥನೆ ಸಲ್ಲಿಸುವ ಅಗತ್ಯವಿದೆ ಎಂದು ಗಣೇಶ್ ಹೇಳಿದರು.
ಸರ್ವಧರ್ಮಗಳ ಮುಖಂಡರು ಈ ಬಗ್ಗೆ ಚರ್ಚಿಸಿ ದಿನವೊಂದನ್ನು ಗೊತ್ತು ಮಾಡಿ ಪ್ರಾರ್ಥನೆ ಸಲ್ಲಿಸಬೇಕೆಂದು ಮನವಿ ಮಾಡಿದರು. ಜಿಲ್ಲೆಯ ಶಾಸಕರುಗಳು ಕೂಡ ಕೊಡಗಿನ ಕುಲದೇವಿ ಕಾವೇರಿ ಹಾಗೂ ಮಳೆದೈವ ಪಾಡಿ ಶ್ರೀಇಗ್ಗುತ್ತಪ್ಪ ದೇವರಿಗೆ ಪ್ರತಿವರ್ಷ ಮಳೆಗಾಲ ಆರಂಭವಾಗುವ ಜೂನ್ ತಿಂಗಳಿನಲ್ಲಿ ಪೂಜೆ ಸಲ್ಲಿಸಿ ಯಾವುದೇ ಅನಾಹುತ ಸಂಭವಿಸದಂತೆ ಪ್ರಾರ್ಥಿಸುವ ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.