ಮಳೆಗೆ ಕೊಚ್ಚಿಹೋದ ಜೋಡುಪಾಲದ ಕಿರಿಕಿಲಿ ಸೇತುವೆ : ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

08/08/2020

ಮಡಿಕೇರಿ ಆ. 8 : ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ಕಿರಿಕಿಲಿ ರಸ್ತೆಯಲ್ಲಿರುವ ಸೇತುವೆ ಮಹಾಮಳೆಯಿಂದ ಹಾನಿಯಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಜೋಡುಪಾಲದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಗ್ರಾಮಸ್ಥರು, 2018 ಆಗಸ್ಟ್ ತಿಂಗಳಿನಲ್ಲಿ ನಡೆದ ಪ್ರಾಕೃತಿ ವಿಕೋಪದ ಸಂದರ್ಭ ಮದೆನಾಡು ಗ್ರಾಮದ ಕಿರಿಕಿಲಿ ರಸ್ತೆ ಯಲ್ಲಿರುವ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ಇದೀಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ, ಮಳೆಗೆ ಮತ್ತೆ ಸೇತುವೆ ಹಾನಿಗೀಡಾಗಿದ್ದು, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಈ ವರೆಗೂ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಈ ಭಾಗದಲ್ಲಿ ಅಪಘಾತ ಸಂಭವಿಸಿದಲ್ಲಿ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಕಷ್ಟಕರವಾಗಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಗಮನಹರಿಸಿ ಸೇತುವೆ ಸರಿಪಡಿಸುವಂತೆ ಮನವಿ ಮಾಡಿದರು.