ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರ ಆರೋಗ್ಯ ತಪಾಸಣೆ ಕಡ್ಡಾಯ
08/08/2020

ಮಡಿಕೇರಿ ಆ.8 ಪರಿಹಾರ ಕೇಂದ್ರಗಳಲ್ಲಿನ ಪ್ರತಿಯೊಬ್ಬರಿಗೂ ಸಹ ಕೋವಿಡ್ ಪರೀಕ್ಷೆ ನಡೆಸಿ, ಪಾಸಿಟಿವ್ ವರದಿ ಬಂದರೆ ಆಸ್ಪತ್ರೆಗೆ ಸೇರಿಸಿ, ನೆಗೆಟಿವ್ ಬಂದವರನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪರಿಹಾರ ಕೇಂದ್ರಗಳಲ್ಲಿ ಇರಿಸಿ ಆರೈಕೆ ಮಾಡಲಾಗುವುದು ಎಂದು ವಿ.ಸೋಮಣ್ಣ ಅವರು ತಿಳಿಸಿದರು.
ಇಡೀ ಜಿಲ್ಲೆಯ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಮತ್ತಷ್ಟು ಮುತುವರ್ಜಿ ವಹಿಸಬೇಕು. ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಯ ಜೊತೆಗೆ ಜನರ ಆರೋಗ್ಯ ರಕ್ಷಣೆಯೂ ಸಹ ಮುಖ್ಯವಾಗಿದೆ. ಸರ್ಕಾರದ ಕೆಲಸ ದೇವರ ಕೆಲಸ ಎಂಬ ನಾಣ್ಣುಡಿಯಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.