ಕೊಡಗು ಜಿಲ್ಲೆಯಲ್ಲಿ ಎಲ್ಲೆಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ : ಇಲ್ಲಿದೆ ಮಾಹಿತಿ

ಮಡಿಕೇರಿ ಆ.8 : ಮಡಿಕೇರಿ ತಾಲೂಕು ಭಾಗಮಂಡಲ ಹೋಬಳಿ, ಕಾಶಿಮಠ 52 ಕುಟುಂಬದ 109 ಮಂದಿ ಆಶ್ರಯ ಪಡೆದಿದ್ದಾರೆ. ಕೆ.ವಿ.ಜಿ.ಕಾಲೇಜು, ಭಾಗಮಂಡಲದ 57 ಕುಟುಂಬಗಳ 165 ಮಂದಿ, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ, ಕಡಗದಾಳುವಿನಲ್ಲಿ 22 ಕುಟುಂಬದ 40 ಮಂದಿ ಸೇರಿದಂತೆ ಮಡಿಕೇರಿ ತಾ: ಒಟ್ಟು 3 ಕೇಂದ್ರಗಳಲ್ಲಿ 131 ಕುಟುಂಬದ 314 ಮಂದಿ ಆಶ್ರಯ ಪಡೆದಿದ್ದಾರೆ.
ವಿರಾಜಪೇಟೆ ತಾಲೂಕಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕರಡಿಗೋಡುವಿನಲ್ಲಿ 23 ಕುಟುಂಬದ 53 ಮಂದಿ, ಸರ್ಕಾರಿ ಪ್ರೌಢಶಾಲೆ, ಕೊಂಡಂಗೇರಿಯ 8 ಕುಟುಂಬದ 27 ಮಂದಿ, ಬಸವೇಶ್ವರ ಸಮುದಾಯ ಭವನ, ಕರಡಿಗೋಡುವಿನಲ್ಲಿ 5 ಕುಟುಂಬದ 27 ಮಂದಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಹುದಿಕೇರಿಯ 31 ಕುಟುಂಬದ 112 ಮಂದಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಬಲ್ಯಮಂಡೂರು ವಿನಲ್ಲಿ 5 ಕುಟುಂಬದ 16 ಮಂದಿ,ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಚಿಕ್ಕಪೇಟೆ, ವಿರಾಜಪೇಟೆಯ 11 ಕುಟುಂಬದ 17 ಮಂದಿ ಸೇರಿದಂತೆ ವಿರಾಜಪೇಟೆ ತಾ: ಒಟ್ಟು 6 ಕೇಂದ್ರಗಳು 83 ಕುಟುಂಬದ 252 ಮಂದಿ ಆಶ್ರಯ ಪಡೆದಿದ್ದಾರೆ. ಜಿಲ್ಲೆಯ ಒಟ್ಟು 9 ಪರಿಹಾರ ಕೇಂದ್ರಗಳಲ್ಲಿ 214 ಕುಟುಂಬದ 566 ಮಂದಿ ಆಶ್ರಯ ಪಡೆದಿದ್ದಾರೆ.
ಭೂ ಕುಸಿತ ಮತ್ತು ಪ್ರವಾಹದಿಂದ ಬಂದ್ ಆದ ರಸ್ತೆಗಳ ವಿವರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಜರಿದಿರುವುದರಿಂದ ಮತ್ತು ಮರ ಬಿದ್ದಿರುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ತುರ್ತಾಗಿ ಕ್ರಮ ವಹಿಸಬಹುದಾದ ಕಡೆಗಳಲ್ಲಿ ಸಂಬಂಧಪಟ್ಟ ಇಲಾಖೆಗಳಿಂದ ತುರ್ತು ಕ್ರಮ ವಹಿಸಿ ರಸ್ತೆಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಜಿಲ್ಲೆಯ ಕೆಲವು ರಸ್ತೆಗಳು ಭೂ ಕುಸಿತ ಮತ್ತು ಪ್ರವಾಹದಿಂದ ಬಂದ್ ಆಗಿರುತ್ತವೆ.
ವಾಹನ ಸಂಚಾರ ಸ್ಥಗಿತಗೊಂಡಿರುವ ರಸ್ತೆಗಳು: ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಶಾಲನಗರದಿಂದ-ಗುಡ್ಡೆ ಹೊಸೂರಿನ ವರೆಗಿನ ಸಂಚಾರ. ಕತ್ತಲೆಕಾಡು-ಮರಗೋಡು ರಸ್ತೆ ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಬೇತ್ರಿ ಸೇತುವೆಯ ಮೇಲಿನ ಸಂಚಾರ. ಮುತ್ತಾರುಮುಡಿ, ಕಗ್ಗೊಡ್ಲು, ಭಾಗಮಂಡಲ-ಅಯ್ಯಂಗೇರಿ ರಸ್ತೆ, ಭಾಗಮಂಡಲ-ತಲಕಾವೇರಿ ರಸ್ತೆ, ಚೆಟ್ಟಿಮಾನಿ ಕಿರಿಯ ಸೇತುವೆ ರಸ್ತೆ
ಅತಿವೃಷ್ಟಿಯಿಂದ ಆಗಬಹುದಾದ ತೊಂದರೆಗಳನ್ನು ಎದುರಿಸಲು ಜಿಲ್ಲಾಡಳಿತವು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರುತ್ತಾರೆ. ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಜನರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಮೊಕ್ಕಾಂ ಹೂಡಿದ್ದು, ತುರ್ತು ಸಂದರ್ಭದಲ್ಲಿ ನೆರವಿಗೆ ಬರಲಿವೆ. ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ 24×7 ನಿಯಂತ್ರಣಾ ಕೊಠಡಿಗಳು ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾಟ್ಸಪ್‍ನಲ್ಲಿ ಸಹ ಪ್ರಕೃತಿ ವಿಕೋಪ ಸಂಬಂಧಿತ ದೂರುಗಳನ್ನು ಸ್ವೀಕರಿಸಲಾಗುತ್ತಿದ್ದು, ತುರ್ತು ಕ್ರಮ ವಹಿಸಲಾಗುತ್ತಿದೆ.
ಹಾರಂಗಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಕೃತಿ ವಿಕೋಪ ಸಂಬಂಧಿತ ಹಾನಿಯ ಬಗ್ಗೆ ವಿವರ ಮತ್ತು ನೆರವು ಕೋರಲು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಂಟ್ರೋಲ್ ಕೊಠಡಿ ಸಂ:08272-221077 ಮತ್ತು ವಾಟ್ಸಪ್ ನಂ.8550001077 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.