ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಮಾಹಿತಿ

08/08/2020

ಮಡಿಕೇರಿ ಆ.8 : ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ಸ್ಥಳಗಳಲ್ಲಿ ಬರೆಗಳು ಜರಿದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಮಡಿಕೇರಿ ತಾಲ್ಲೂಕು ಭಾಗಮಂಡಲ, ಅಯ್ಯಂಗೇರಿ, ತಾವೂರು, ತಣ್ಣಿಮಾನಿ, ಸಣ್ಣ ಪುಲಿಕೋಟು, ಬೇತು, ಎಮ್ಮೆಮಾಡು, ಕೊಳಕೇರಿ, ನಾಪೋಕ್ಲು, ಬೆಟ್ಟಗೇರಿ, ದೊಡ್ಡ ಪುಲಿಕೋಟು, ಐಕೊಳ, ಹೊದ್ದೂರು, ಹೊದವಾಡ, ಕುಂಬಳದಾಳು, ಕಿಗ್ಗಾಲು, ಎಸ್.ಕಟ್ಟೆಮಾಡು, ಪರಂಬು ಪೈಸಾರಿ ಸೇರಿದಂತೆ 18, ವಿರಾಜಪೇಟೆ ತಾಲ್ಲೂಕುವಿನ ಕರಡಿಗೋಡು, ಗುಹ್ಯ, ಕೊಂಡಂಗೇರಿ, ಹಚ್ಚಿನಾಡು, ನಾಲ್ಕೇರಿ, ಹೈಸೊಡ್ಲೂರು, ಬಲ್ಯಮಂಡೂರು, ಬಿರುನಾಣಿ, ತೆರಾಲು, ಅರುವತ್ತೊಕ್ಲು, ನಿಡುಗುಂಬ, ಹಾತೂರು, ಮೈತಾಡಿ, ಬಾಳೆಲೆ ಸೇರಿ14, ಸೋಮವಾರಪೇಟೆ ತಾಲ್ಲೂಕು ಮುಳ್ಳುಸೋಗೆ ಗ್ರಾಮದ ಕುವೆಂಪು ಬಡಾವಣೆ, ತಮ್ಮಣ್ಣ ಶೆಟ್ಟಿ ಬಡಾವಣೆ, ಬಸವನಹಳ್ಳಿ, ಮಾದಾಪಟ್ಟಣ, ಬೈಚನಹಳ್ಳಿ, ಕೂಡ್ಲೂರು (ನಿಸರ್ಗ ಬಡಾವಣೆ) ಬೆಟ್ಟದಕಾಡು, ಬರಡಿ, ಕುಂಬಾರಗುಂಡಿ ಕುಶಾಲನಗರ ಪಟ್ಟಣ ಪಂಚಾಯತಿ ಕುಶಾಲನಗರ ಸಾಯಿ ಬಡಾವಣೆ, ಬಸಪ್ಪ ಬಡಾವಣೆ, ತ್ಯಾಗರಾಜ ರಸ್ತೆ, ವಿವೇಕಾನಂದ ಬಡಾವಣೆ, ರಸೂಲ್ ಬಡಾವಣೆ, ಶೈಲಜಾ ಬಡಾವಣೆ, ಇಂದಿರಾ ಬಡಾವಣೆ, ದಂಡಿನಪೇಟೆ, ಅಯ್ಯಪ್ಪ ಸ್ವಾಮಿ ದೇವಾಲಯ ರಸ್ತೆ, ಬಿದ್ದಪ್ಪ ಬಡಾವಣೆ, ನಿಜಾಮುದ್ದೀನ್ ಬಡಾವಣೆ, ತಾವರೆಕೆರೆ ರಸ್ತೆ ಸೇರಿ 12 ಸ್ಥಳಗಳನ್ನು ಒಳಗೊಂಡು ಒಟ್ಟು ಪ್ರವಾಹ ಪೀಡಿತ ಪ್ರದೇಶಗಳು 52 ಆಗಿದೆ.