ವಿರಾಜಪೇಟೆ ಅಯ್ಯಪ್ಪ ಬೆಟ್ಟಕ್ಕೆ ಜನಪ್ರತಿನಿಧಿಗಳ ಭೇಟಿ : ಅಸಹಾಯಕರ ಅಳಲು

08/08/2020

ಮಡಿಕೇರಿ ಆ.8 : ವಿರಾಜಪೇಟೆ ಭೂ ಕುಸಿತ ಪ್ರದೇಶ ಅಯ್ಯಪ್ಪ ಬೆಟ್ಟಕ್ಕೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಅಲ್ಲಿನ ನಿವಾಸಿಗಳ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಇಲ್ಲಿ ವಾಸವಾಗಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿರಾಜಪೇಟೆ ಪಟ್ಟಣ ಪಂಚಾಯತಿ ವತಿಯಿಂದ ಐಮಂಗಲದಲ್ಲಿ 4 ಎಕರೆ ಖಾಸಗಿ ಜಾಗವನ್ನು ಗುರುತಿಸಲಾಗಿದ್ದು, ಸುಮಾರು 400 ಮನೆಗಳನ್ನು ನಿರ್ಮಿಸಬಹುದು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಮಾಹಿತಿ ನೀಡಿದರು.