ಕೊಡಗಿನ ಕಡಿದಾದ ಪ್ರದೇಶದಲ್ಲಿ ಮಹಿಳಾ ಅಧಿಕಾರಿಗಳ ಪರಿಶ್ರಮ

10/08/2020

ಮಡಿಕೇರಿ ಆ.10 : ಕಳೆದ ಒಂದು ವಾರದಿಂದ ಮಹಾಮಳೆಗೆ ನಲುಗಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಜನರು ಸಂಕಷ್ಟವನ್ನು ಎದುರಿಸುತ್ತಿದ್ದರೆ, ಜನರ ನೋವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲೆಯ ಮಹಿಳಾ ಅಧಿಕಾರಿಗಳು ಮಾಡುತ್ತಿದ್ದಾರೆ. ಬ್ರಹ್ಮಗಿರಿ ಬೆಟ್ಟ ಕುಸಿದ ತಲಕಾವೇರಿ ಸೇರಿದಂತೆ ವಿವಿಧ ಭಾಗಗಳ ಕಡಿದಾದ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಧೈರ್ಯದಿಂದ ಮುನ್ನುಗ್ಗಿ ಕಾರ್ಯಾಚರಣೆಗೆ ಸ್ಫೂರ್ತಿ ತುಂಬುತ್ತಿದ್ದಾರೆ.