ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೊಡಗು ಭೇಟಿ

10/08/2020

ಮಡಿಕೇರಿ ಆ.10 : ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.12 ರಂದು ಆಗಮಿಸಲಿದ್ದಾರೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ಬೆಟ್ಟ ಕುಸಿದ ತಲಕಾವೇರಿ ಪ್ರದೇಶಕ್ಕೆ ಭೇಟಿ ನೀಡಲಿದ್ದು, ನಂತರ ಕರಡಿಗೋಡು, ನೆಲ್ಯಹುದಿಕೇರಿ, ನಾಪೋಕ್ಲು, ಕುಶಾಲನಗರ ಸೇರಿದಂತೆ ವಿವಿಧ ಭಾಗಗಳ ಮಳೆಹಾನಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.