ಆ.11 ರಂದು ಮಡಿಕೇರಿಯಲ್ಲಿ ಜಿಲ್ಲಾ ಜೆಡಿಎಸ್ ಸಭೆ

10/08/2020

ಮಡಿಕೇರಿ ಆ.10 : ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಸಭೆ ಆ.11 ರಂದು ಮಡಿಕೇರಿಯಲ್ಲಿರುವ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾನಿಯ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಜಿಲ್ಲೆಗೆ ಆಗಮಿಸಲಿರುವ ಜೆಡಿಎಸ್ ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಕುರಿತು ಪೂರ್ವಭಾವಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.