ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಕೊಡಗು ಜಿಲ್ಲೆಗೆ 18ನೇ ಸ್ಥಾನ

10/08/2020

ಮಡಿಕೇರಿ ಆ. 10 : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ.

ಕೊಡಗು ಜಿಲ್ಲೆ ಕಳೆದ ಬಾರಿ ಶೇ.78.81 ಫಲಿತಾಂಶದೊಂದಿಗೆ ರಾಜ್ಯದಲ್ಲಿ 22 ನೇ ಸ್ಥಾನ ಗಳಿಸಿದ್ದು, ಈ ಬಾರಿ 18 ನೇ ಸ್ಥಾನ ಪಡೆಕೊಂಡಿದೆ.
ಚಿಕ್ಕಬಳ್ಳಾಪುರ ಮೊದಲ ಸ್ಥಾನ ಪಡೆದುಕೊಂಡಿದ್ದು, ಬೆಂಗಳೂರು ಗ್ರಾಮಾಂತರ ದ್ವೀತಿಯ ಸ್ಥಾನ ಪಡೆದುಕೊಂಡಿದೆ.

ಈ ಬಾರಿ ಶೇ.71.80 ಮಂದಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

8.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5.82,316 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

277 ಮೌಲ್ಯಮಾಪನಾ ಕೇಂದ್ರಗಳಲ್ಲಿ 52310 ಮೌಲ್ಯಮಾಪಕರು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದರು.