ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ ನಾರಾಯಾಣಾಚಾರ್ ಮಕ್ಕಳು

10/08/2020

ಮಡಿಕೇರಿ ಆ.10 :-ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರನ್ನು ತಲಕಾವೇರಿ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಮಕ್ಕಳು ಸೋಮವಾರ ಭಾಗಮಂಡಲ ಹೋಟೆಲ್ ಮಯೂರದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‍ನಲ್ಲಿ ನೆಲೆಸಿರುವ ಇಬ್ಬರು ಮಕ್ಕಳು ಸಚಿವರನ್ನು ಭೇಟಿ ಮಾಡಿ ಕಾರ್ಯಾಚರಣೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಈಗಾಗಲೇ ಆನಂದ ತೀರ್ಥ ಅವರ ದೇಹ ಸಿಕ್ಕಿದೆ. ಇನ್ನು ನಾಲ್ವರು ಕಾಣೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಹಲವು ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಇತರರು ಇದ್ದರು.