ಆ.12 ರಂದು ಮಡಿಕೇರಿ, ಸೋಮವಾರಪೇಟೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

10/08/2020

ಮಡಿಕೇರಿ ಆ.10 : ಸುಂಟಿಕೊಪ್ಪ ಹಾಗೂ ಮಡಿಕೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವ ಹಿನ್ನೆಲೆ ಆಗಸ್ಟ್, 12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ನಾಕೂರು, ಕೆದಕಲ್, ಹೊಸಕೋಟೆ, ಮೋದೂರು, ಜಂಜೂರು ಬಾಣೆ, ಮಡಿಕೇರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.