4 ಸಾವಿರ ಕೋಟಿ ರೂ. ನೆರವಿಗೆ ಮನವಿ

11/08/2020

ಬೆಂಗಳೂರು ಆ.10 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತುಮಾಹಿತಿ ಒದಗಿಸಿದರು. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಎಂದು ಪ್ರಧಾನಿ ಮಂತ್ರಿಗಳು ಭರವಸೆ ನೀಡಿದರು.
ಪ್ರವಾಹದಲ್ಲಿ ಮೃತಪಟ್ಟವರಿಗೆ ತೀವ್ರಸಂತಾಪ ವ್ಯಕ್ತಪಡಿಸಿ, ಜನಜಾನುವಾರುಗಳ ರಕ್ಷಣೆ ನಮ್ಮ ಆದ್ಯತೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ನಾಲ್ಕು ಸಾವಿರ ಕೋಟಿ ರೂ.ಗಳ ವಿಶೇಷ ಆರ್ಥಿಕ ನೆರವನ್ನು ಒದಗಿಸಲು ಕೋರಲಾಯಿತು, ತಕ್ಷಣದ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಎಸ್.ಡಿ ಆರ್.ಎಫ್ ನ ಕಂತು 395 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.