ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಸೋಮಣ್ಣ

11/08/2020

ಮಡಿಕೇರಿ ಆ.11 : ಪ್ರವಾಹ ಪೀಡಿತ ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿದರು. ಕೊಡಗಿನಲ್ಲಿರುವ ಮಳೆ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತಿತರರು ಹಾಜರಿದ್ದರು.