ಸ್ವಾತಂತ್ರ್ಯ ದಿನಾಚರಣೆ : ಸೋಮವಾರಪೇಟೆ ತಾ. ಪಂ. ಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ

11/08/2020

ಸೋಮವಾರಪೇಟೆ ಆ. 11 : 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಲುವಾಗಿ ಪೂರ್ವಭಾವಿ ಸಿದ್ಧತಾ ಸಭೆ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಈಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಆರ್. ಗೋವಿಂದರಾಜ್ ವಹಿಸಿದ್ದರು. ಧ್ವಜಾರೋಹಣವನ್ನು ಆಗಸ್ಟ್ 15ರ ಶನಿವಾರ ಬೆಳಿಗ್ಗೆ 8.30ಕ್ಕೆ ನೆರವೇರಿಸಲಾಗುವುದು. ನಂತರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬೆಳಿಗ್ಗೆ 9ಗಂಟೆಗೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಕೋವಿದ್ ವಾರಿಯರ್ಸ್‍ಗಳಿಗೆ ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಸದಸ್ಯರಾದ ಎಸ್.ಡಿ. ವಿಜೇತ, ಜೆ.ಸಿ. ಶೇಖರ್, ಶಿಕ್ಷಣ ಇಲಾಖೆಯ ಸದಾಶಿವಪಲ್ಲೆದ್, ಚನ್ನಪ್ಪ, ಸಿಪಿಐ ನಂಜುಡೇಗೌಡ, ಪ.ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮತ್ತಿತರರು ಇದ್ದರು.