ಕಾರ್ಯಾಚರಣೆ ತಂಡದೊಂದಿಗೆ ಊಟ ಮಾಡಿ ಗಮನ ಸೆಳೆದ ಜಿಲ್ಲಾ ಉಸ್ತುವಾರಿ ಸಚಿವರು

ಮಡಿಕೇರಿ ಆ.11 : ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಖುದ್ದು ಭೇಟಿ ನೀಡಿ ಶೋಧ ಕಾರ್ಯಾಚರಣೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು.
ಸತತ 6 ದಿನಗಳಿಂದ ಜಿಲ್ಲೆಯಲ್ಲಿಯೇ ಇರುವ ಸಚಿವರು, ತಲಕಾವೇರಿಯ ಬೆಟ್ಟ ಕುಸಿತ ಪ್ರಕರಣ ಮತ್ತು ಮಳೆ ಹಾನಿ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವ ಮೂಲಕ ರಕ್ಷಣಾ ಕಾರ್ಯಾಚರಣೆ ಮತ್ತು ಪ್ರಕೃತಿ ವಿಕೋಪ ಸಂಬಂಧ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ.
ಈ ಸಂದರ್ಭ ಘಟನಾ ಸ್ಥಳಕ್ಕೆ ತೆರಳಿದ ಸಚಿವರು ಶೋಧ ಕಾರ್ಯ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ಎನ್‍ಡಿಆರ್‍ಎಫ್ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರಾದ ಪ್ರತಾಪ್ ಸಿಂಹ ಅವರು ಭಾಗಮಂಡಲದ ಹೋಟೆಲ್ ಮಯೂರದಲ್ಲಿ ಚರ್ಚಿಸಿದರು.
ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ ಅವರೊಂದಿಗೆ ತೆರಳಿದ ಸಚಿವರು ಭಗಂಡೇಶ್ವರ ಸನ್ನಿಧಿಯಲ್ಲಿ ದರ್ಶನ ಪಡೆದರು.
ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಾಚರಣೆ ಸಂದರ್ಭದಲ್ಲಿ ಹಲವು ಸಲಹೆ, ಮಾರ್ಗದರ್ಶನ ನೀಡಿದರಲ್ಲದೇ, ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ರಕ್ಷಣಾ ತಂಡಗಳಿಗೆ ಊಟ ಬಡಿಸುವ ಮೂಲಕ ಪೆÇ್ರೀತ್ಸಾಹ ತುಂಬಿದರು. ಹಾಗೆಯೇ ಸಚಿವರು ಸಹ ಕಾರ್ಯಾಚರಣೆ ತಂಡದೊಂದಿಗೆ ಊಟ ಮಾಡಿದ್ದು, ವಿಶೇಷವಾಗಿತ್ತು. ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ ಇತರರು ಇದ್ದರು.
