ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

12/08/2020

ಮಡಿಕೇರಿ ಆ.12 : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ ಡಿಪ್ಲೋಮ ಜೆಓಸಿ/ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ಮಾದರಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಇವರಿಂದ ಪಡೆದು 2020ರ ನವೆಂಬರ್, 30 ರೊಳಗೆ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಸಕ್ತ(2020-21) ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಕರ್ನಾಟಕ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ(ಅಧಿಕಾರಿಗಳನ್ನು ಹೊರತು ಪಡಿಸಿ) ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ಮಾದರಿ ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಅವರಿಂದ ಪಡೆದು 2020ರ ನವೆಂಬರ್, 30 ಒಳಗೆ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.