ಪಾಕ್ ಗೆ ತೈಲ ನೀಡಲ್ಲವೆಂದ ಸೌದಿ
13/08/2020

ನವದೆಹಲಿ ಆ.13 : ಇನ್ನು ಮುಂದೆ ತಾನು ಹಣದ ಸಾಲ ಅಥವಾ ತೈಲ ಪೂರೈಕೆ ಮಾಡುವುದಿಲ್ಲ ಎಂದು ಸೌದಿ ಅರೇಬಿಯಾ ಹೇಳಿದೆ.
ಈ ಬಗ್ಗೆ ಮಿಡ್ಲ್ ಈಸ್ಟ್ ಮಾನಿಟರ್ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಸ್ನೇಹ ಸಂಬಂಧ ಕೊನೆಗೂ ಅಂತ್ಯವಾಗಿದ್ದು, ಪಾಕಿಸ್ತಾನಕ್ಕೆ ಇನ್ನು ಮುಂದೆ ತಾನು ಹಣದ ಸಾಲ ಅಥವಾ ತೈಲ ಪೂರೈಕೆ ಮಾಡುವುದಿಲ್ಲ ಎಂದು ಸೌದಿ ಅರೇಬಿಯಾ ಘೋಷಣೆ ಮಾಡಿದೆ ಎಂದು ಹೇಳಿದೆ.
2018ರ ನವೆಂಬರ್ ನಲ್ಲಿ ಸೌದಿ ಅರೇಬಿಯಾವು ಘೋಷಣೆ ಮಾಡಿದ್ದ 6.2 ಬಿಲಿಯನ್ ಡಾಲರ್ ಪ್ಯಾಕೇಜ್ ನ ಭಾಗವಾಗಿತ್ತು ಆ ಸಾಲ. ಅದರಲ್ಲಿ 3 ಬಿಲಿಯನ್ ಹಣದ ರೂಪದ ಸಾಲ ಹಾಗೂ 3.2 ಬಿಲಿಯನ್ ಮೊತ್ತದ ತೈಲವನ್ನು ಸಾಲವನ್ನು ನೀಡುವ ಒಪ್ಪಂದ ಅದಾಗಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಈಗ ಪಾಕಿಸ್ತಾನಕ್ಕೆ ತಾನು ಹಣದ ಸಾಲ ಮತ್ತು ಇಂಧನ ಪೂರೈಕೆ ಮಾಡುವುದಿಲ್ಲ ಎಂದು ಸೌದಿ ಘೋಷಣೆ ಮಾಡಿದೆ.
