ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

13/08/2020

ಶ್ರೀನಗರ ಆ.13 : ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದಲ್ಲಿ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಹಿರಿಯ ಕಮಾಂಡರ್ ಹತನಾಗಿದ್ದು, ಓರ್ವ ಸೈನಿಕ ಸಾವನ್ನಪ್ಪಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹತನಾದ ಪುಲ್ವಾಮಾದ ಲಾಲ್‍ಹಾರ ಕಾಕ್‍ಪೋರಾ ನಿವಾಸಿಯಾದ ಹಿಜ್ಬುಲ್‍ಕಮಾಂಡರ್ ಆಜಾದ್ ಲಲ್‍ಹಾರಿ, ದಕ್ಷಿಣ ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಭಾಗಿಯಾಗಿರುವುದರಿಂದ ಕಾರ್ಯಾಚರಣೆ ದೊಡ್ಡ ಯಶಸ್ಸು ಕಂಡಿದೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್‍ಬಾಗ್ ಸಿಂಗ್ ಹೇಳಿದ್ದಾರೆ.
ಪುಲ್ವಾಮಾದ ಕಮ್ರಾಜಿಪೊರಾದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಆರ್ಪಿಎಫ್, ವಿಶೇಷ ಕಾರ್ಯಾಚರಣಾ ತಂಡ (ಎಸ್‍ಒಜಿ) ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.