ಮಾಜಿ ರಾಷ್ಟ್ರಪತಿ ಸ್ಥಿತಿ ಮತ್ತಷ್ಟು ಗಂಭೀರ

13/08/2020

ನವದೆಹಲಿ ಆ.13 : ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಬುಧವಾರ ಬೆಳಗ್ಗೆ ಮತ್ತಷ್ಟು ಗಂಭೀರವಾಗಿದ್ದು, ವೆಂಟಿಲೇಟರ್‍ನೆರವಿನಿಂದ ಉಸಿರಾಡುತ್ತಿದ್ದಾರೆ.
ಆಸ್ಪತ್ರೆ ವರದಿಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಖರ್ಜಿ ಅವರ ಶೀಘ್ರ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ, ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಮುಖರ್ಜಿ ಅವರ ಬಂಗಾಳದ ಪುರಾತನ ಮನೆಯಲ್ಲಿಯೂ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಮುಖರ್ಜಿ ಆ.10ರಂದು ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಆದರೆ, ಅದರಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಈ ನಡುವೆ, ಅವರಿಗೆ ಕೋವಿಡ್‍ಸೋಂಕು ಕೂಡ ದೃಢಪಟ್ಟಿತ್ತು. ರಕ್ಷಣಾ ಸಚಿವ ರಾಜನಾಥ್‍ಸಿಂಗ್‍ಅವರು ಆಸ್ಪತ್ರೆಗೆ ಭೇಟಿ ನೀಡಿ ಮುಖರ್ಜಿ ಅವರು ಆರೋಗ್ಯ ವಿಚಾರಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.