ಆ.15 ರಂದು ಜಿಲ್ಲಾ ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ ಆ.13 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಆಗಸ್ಟ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆಯುರ್ವೇದ ಆಸ್ಪತ್ರೆಯ ಪಂಚಕರ್ಮ ವಿಭಾಗದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಭಾಗಮಂಡಲ ಗಜಗಿರಿ ಬೆಟ್ಟದಲ್ಲಿ ನಡೆಯುತ್ತಿರುವ ತುರ್ತು ಕಾರ್ಯಾಚರಣೆ ಪರಿವೀಕ್ಷಣೆ ಮಾಡಲಿದ್ದಾರೆ.
ನಂತರ ಮಧ್ಯಾಹ್ನ 1 ಗಂಟೆಗೆ ಭಾಗಮಂಡಲದ ಕೆಎಸ್‍ಟಿಡಿಸಿ ಹೋಟೆಲ್‍ನಲ್ಲಿ ಗಜಗಿರಿ ಬೆಟ್ಟದಲ್ಲಿ ಭೂಕುಸಿತದಿಂದಾಗಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.
