ಡಿ.ಜೆ.ಹಳ್ಳಿ ಗಲಭೆ ಪ್ರಕರಣ : ವಿರಾಜಪೇಟೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

13/08/2020

ಮಡಿಕೇರಿ ಆ.13 : ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಖಂಡಿಸಿ ವಿರಾಜಪೇಟೆ ಪಟ್ಟಣದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ತಾಲ್ಲೂಕು ಭಜರಂಗದಳದ ನೇತೃತ್ವದಲ್ಲಿ ಗಡಿಯಾರ ಕಂಬದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ವಕೀಲ ಕೃಷ್ಣಮೂರ್ತಿ, ವಿರಾಜಪೇಟೆ ನಗರ ಭಾ.ಜ.ಪ ಅಧ್ಯಕ್ಷ ಟಿ.ಪಿ.ಕೃಷ್ಣ, ಗ್ರಾ.ಪಂ ಮಾಜಿ ಸದಸ್ಯ ಕಂಠಿಕಾರ್ಯಪ್ಪ, ಜಿಲ್ಲಾ ವಿಶ್ವ ಹಿಂದೂ ಪರಿಷತ್ ವಿಶೇಷ ಸಂಪರ್ಕ ಪ್ರಮುಖ ಅಜಿತ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಬಿ.ಎಂ.ಕುಮಾರ್, ತಾಲ್ಲೂಕು ಭಜರಂಗದಳ ಸಂಚಾಲಕ ವಿವೇಕ್ ರೈ, ನಗರ ಸಂಚಾಲಕ ದಿನೇಶ್ ನಾಯರ್, ಅನಿಲ್ ಮಂದಣ್ಣ, ಪಟ್ಟಣ ಪಂಚಾಯಿತಿ ಸದಸ್ಯ ಕೆ.ಬಿ.ಹರ್ಷವರ್ಧನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.