ಹಾಲೇರಿ ಗ್ರಾಮದ ಪೈಸಾರಿ ಸೀಲ್‍ಡೌನ್

13/08/2020

ಮಡಿಕೇರಿ ಆ. 13 : ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿಗೆ ಸೇರಿದ ಹಾಲೇರಿ ಗ್ರಾಮದ ತಾತಿಬಾಣೆ ಪೈಸಾರಿಯ 39 ವರ್ಷದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆ ಪ್ರದೇಶವನ್ನು ಕಂಟೈನ್‍ಮೆಂಟ್ ವಲಯ ಎಂದು ಘೋಷಿಸಿ 14 ದಿನಗಳವರೆಗೆ ಅಧಿಕಾರಿಗಳು ಸೀಲ್‍ಡೌನ್ ಮಾಡಿದರು.
ಸೋಮವಾರಪೇಟೆ ತಹಶೀಲ್ಧಾರ್ ಗೋವಿಂದರಾಜು ಅವರ ಮಾರ್ಗದರ್ಶನದಲ್ಲಿ ಕಂದಾಯ ನಿರೀಕ್ಷಕ ಶಿವಪ್ಪ, ಗ್ರಾಮ ಲೆಕ್ಕಿಗ ದಪ್ನಾ, ಕೆದಕಲ್ ಪಿಡಿಒ ವೀಣಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಅವರ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿ ಸೂಕ್ತ ಸಲಹೆ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಆ ಪ್ರದೇಶವನ್ನು ಗ್ರಾಮ ಪಂಚಾಯಿತಿ ವತಿಯಿಂದ ಔಷಧಿ ಸಿಂಪಡಿಸಿ ನಂತರ ಸೀಲ್‍ಡೌನ್ ಮಾಡಲಾಯಿತು.