ಜೆಡಿಎಸ್ ಯುವ ಘಟಕದ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಅಭಿತ್ ಅಪ್ಪಯ್ಯ ನೇಮಕ

13/08/2020

ಮಡಿಕೇರಿ ಆ. 13 : ಜಾತ್ಯತೀತ ಜನತಾದಳದ ಮಡಿಕೇರಿ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ ಅಭಿತ್ ಅಪ್ಪಯ್ಯ ಅವರನ್ನು ನೇಮಕ ಮಾಡಲಾಗಿದೆ.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ನೇತೃತ್ವದಲ್ಲಿ ನೇಮಕ ಮಾಡಲಾಯಿತು.
ಈ ಸಂದರ್ಭ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಶಿರ್ ಹಾಗೂ ಎಲ್ಲಾ ಘಟಕದ ನಾಯಕರು ಮತ್ತು ಪದಾಧಿಕಾರಿಗಳು ಹಾಜರಿದ್ದರು.