ನೆರೆ ಪೀಡಿತ ಪ್ರದೇಶಗಳಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ತಂಡ ಭೇಟಿ

13/08/2020

ಮಡಿಕೇರಿ ಆ. 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಡಂಗೇರಿ, ಬೇತ್ರಿಯ ನೆರೆ ಪೀಡಿತ ಪ್ರದೇಶ ಹಾಗೂ ಮನೆಗಳಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜನರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಸಂತ್ರಸ್ತರಿಗೆ ಸಂತ್ವಾನ ಹೇಳಿ, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ನಿರಂತವಾಗಿ ಪ್ರಾಕೃತಿಕ ವಿಕೋಪ ಸಂಭವಿಸಿ, ಸಾಕಷ್ಟು ಕಷ್ಟ, ನಷ್ಟಗಳು ಸಂಭವಿಸಿದ್ದು, ಇನ್ನಾದರೂ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಅಲ್ಲದೇ, ಸ್ಥಳದಲ್ಲೇ ತಹಶೀಲ್ದಾರರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಇದ್ದಾಗ ನೆರೆ ಪೀಡಿತರಿಗೆ ಬಿಡುಗಡೆ ಮಾಡಿದ ಹಣವನ್ನು ಇನ್ನೂ ನೀಡದ ಇಂದಿನ ಬಿಜೆಪಿ ಸರ್ಕಾರದ ನಡೆ ಖಂಡನೀಯ ಎಂದರು.
ನಿಯೋಗದಲ್ಲಿ ಕೊಂಡಂಗೇರಿ ವಲಯಾಧ್ಯಕ್ಷ ಸಾದಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂದಾಯಿ, ಸಾಮಾಜಿಕ ಜಾಲತಾಣ ವಲಯ ಸಂಯೋಜಕ ನಾಸೀರ್, ಬೇತ್ರಿ ವಲಯಾಧ್ಯಕ್ಷ ಮಂಡೆಟ್ಟಿರ ಅನಿಲ್, ವಿರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೆÇನ್ನಕ್ಕಿ, ಸಾಮಾಜಿಕ ಜಾಲತಾಣದ ವಲಯ ಸಂಯೋಜಕ ಪ್ರವೀಣ್, ಹಿರಿಯ ಕಾಂಗ್ರೆಸ್ಸಿಗರಾದ ರಮೇಶ್, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿನೇಶ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ ಸುರೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಕೆ.ಎಂ ಬಾವ, ವಿರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಕೋಲುಮಂಡ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜಾನ್ಸನ್, ಡಿಸಿಸಿ ಸದಸ್ಯ ಮಹಮ್ಮದ್ ರಫಿ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಮತ್ತು ಪ್ರಮುಖರಾದ ಶಬ್ಬೀರ್, ಪ್ರವೀಣ್, ಸಲೀಂ ಹಾಗೂ ಗ್ರಾಮದ ಹಿರಿಯ, ಕಿರಿಯ ಕಾಂಗ್ರೆಸ್ಸಿಗರು ಇದ್ದರು.