ಸ್ವಯಂಪ್ರೇರಿತರಾಗಿ ಸೇವೆಗೆ ಬಂದ ಕೊಡಗು ವೈದ್ಯಕೀಯ ವಿದ್ಯಾರ್ಥಿಗಳು

13/08/2020

ಮಡಿಕೇರಿ ಆ.13 : ಕೊಡಗು ಜಿಲ್ಲೆಯು  ವೈದ್ಯಕೀಯ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದ್ದು, ಮೂರನೇ ವರ್ಷದ ಮತ್ತು ಅಂತಿಮ ವರ್ಷದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ವೈದ್ಯಕೀಯ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. 
ತರಬೇತಿಯನ್ನು ನೀಡುವ ಮೂಲಕ ಅವರ ಸೇವೆಯನ್ನು ಕೋವಿಡ್ ಆಸ್ಪತ್ರೆಯಲ್ಲಿನ ಚಿಕಿತ್ಸೆ ನಿರ್ಧರಣಾ ಪ್ರದೇಶದಲ್ಲಿ ಮತ್ತು ಕೋವಿಡ್ ಸಂಬಂಧದ ರಾಪಿಡ್ ಆಂಟಿಜೆನ್ ಟೆಸ್ಟ್  ಮಾಡಲು ಬಳಸಿಕೊಳ್ಳಲಾಗುತ್ತಿದೆ. 
ಕೊಡಗು ಜಿಲ್ಲಾಡಳಿತವು ಈ ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತದೆ ಮತ್ತು ಅವರ ಸೇವಾ ಮನೋಭಾವವನ್ನು ಶ್ಲಾಘಿಸುತ್ತದೆ ಎಂದು ಹೇಳಿದ್ದಾರೆ.