ಜನರ ಕ್ಷಮೆ ಕೋರಿದ ಶಾಸಕ ಅಖಂಡ

August 14, 2020

ಬೆಂಗಳೂರು ಆ.14 : ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ ಹಲವಾರು ಬೆಂಬಲಿಗರು, ಸ್ಥಳೀಯ ನಿವಾಸಿಗಳು ಅವರ ಮನೆಯ ಹತ್ತಿರ ಸೇರಿದ್ದರು. ಸ್ಥಳೀಯರ ಮಾತುಗಳನ್ನು ಕೇಳಿಸಿಕೊಂಡು ಮೌನವಾಗಿದ್ದ ಶ್ರೀನಿವಾಸ್ ಅವರು, ನಂತರ ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ ಎಂದು ಬಹಿರಂಗವಾಗಿ ಜನರಲ್ಲಿ ಕ್ಷಮೆಯಾಚಿಸಿದರು. ಆಗ ಸ್ಥಳೀಯರು ಕ್ಷಮೆ ಕೇಳುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ನೀವೇ ನಿಂತು ಸಮಸ್ಯೆಯನ್ನು ಬಗೆಹರಿಸಿ ಎಂದು ಹೇಳಿದರು. ಇದೇ ವೇಳೆ ಶಾಸಕರ ಮನೆ ಸುತ್ತಮುತ್ತ ಜನರು ಜಾಮಾಹಿಸಿದ್ದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಜಾರ್ಚ್ ಮಾಡಿದರು.

error: Content is protected !!