ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷ

August 14, 2020

ಬೆಂಗಳೂರು ಆ.14 : ಕರ್ನಾಟಕದಲ್ಲಿ ಕೊರೋನಾ ಅತಿರೇಕ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. ಇನ್ನು ಇಂದು ರಾಜ್ಯದಲ್ಲಿ 6,706 ಪ್ರಕರಣ ಪತ್ತೆಯಾಗಿದ್ದು 103 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6,706 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 103 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,613ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 8,609 ಮಂದಿ ಗುಣಮುಖರಾಗಿದ್ದಾರೆ.