ಕಾಮೆಡ್-ಕೆ ಪರೀಕ್ಷೆಯಲ್ಲಿ ಹಸ್ತಕ್ಷೇಪವಿಲ್ಲ
14/08/2020

ಬೆಂಗಳೂರು ಆ.14 : 2020 ರ ಆ.19 ರಂದು ನಡೆಯಲಿರುವ ಕಾಮೆಡ್-ಕೆ ಪರೀಕ್ಷೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗುರುವಾರ ಹೇಳಿದೆ, ಆದರೆ ಕೋವಿಡ್ -19 ರ ಕಾರಣದಿಂದಾಗಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ
ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ, ಪರೀಕ್ಷೆ ಮುಂದೂಡುವಂತೆ ಮೈಸೂರು ಮೂಲದ ವಕೀಲ ಅಬ್ದುಲ್ಲಾ ಮನ್ನನ್ ಖಾನ್ ಅವರು ರಾಜ್ಯ ಸರ್ಕಾರ, ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ ಮತ್ತು ಯೂನಿಯನ್ ಆಫ್ ಇಂಡಿಯಾಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದರು.
