ಗಲಭೆಯಲ್ಲಿ ಎಸ್ ಡಿಪಿಐ ಪಾತ್ರ ಬೆಳಕಿಗೆ

14/08/2020

ಬೆಂಗಳೂರು ಆ.14 : ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ಪಾತ್ರ ಬೆಳಕಿಗೆ ಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ನ ಕೈವಾಡ ಹಾಗೂ ಅದರಲ್ಲಿ ಶಾಮೀಲಾದವರ ಸಂಪರ್ಕಗಳ ಬಗ್ಗೆ ಆಳವಾದ ತನಿಖೆ ನಡೆಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಎಸ್ ಡಿಪಿಐ ಗೆ ಸೇರಿದ ಜನರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
“ನೆನ್ನೆಯಿಂದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಶಾಂತಿಯುತವಾಗಿದೆ, ಯಾವುದೇ ಅವಗಢಗಳು ನಡೆದಿಲ್ಲ. ತನಿಖೆ ಪ್ರಗತಿಯಲ್ಲಿರುವಂತೆಯೇ ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ, ಎಲ್ಲವನ್ನೂ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ, ಮುಂದಿನ ದಿನಗಳಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.