ಫಿಲ್ಮ್ ಸಿಟಿಗೆ ನೆರವಿನ ಭರವಸೆ

ಬೆಂಗಳೂರು ಆ.14 : ಬಹುನಿರೀಕ್ಷೆಯ ಫಿಲ್ಮ್ ಸಿಟಿಯನ್ನು ರೋರಿಚ್ ಎಸ್ಟೇಟಿನ ಬದಲು ಹೆಸರಘಟ್ಟ ದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರ ರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿಂದು ಡಾ. ಶಿವರಾಜ್ ಕುಮಾರ್ ನೇತೃತ್ವದ ತಂಡ ಭೇಟಿಯಾಗಿ ಕನ್ನಡ ಚಿತ್ರರಂಗದ ಸಮಸ್ಯೆಗಳು,ಚಿತ್ರನಿರ್ಮಾಣದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರು. 0 ನಂತರ ಸುದ್ದಿಗಾ ರರ ಜತೆ ಮಾತನಾಡಿದ ಅವರು, ರೋರಿಚ್ ಎಸ್ಟೇಟಿನಲ್ಲಿ ಪರಿಸರಾತ್ಮಕ ಸಮಸ್ಯೆಗಳು ಎದುರಾದವು. ಹೀಗಾಗಿ ಅಲ್ಲಿ ಈ ಯೋಜನೆ ಸಾಧ್ಯವಾಗುತ್ತಿಲ್ಲ. ಹೆಸರಘಟ್ಟದಲ್ಲಿ ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ಫಿಲ್ಮ್ ಸಿಟಿ ನಿರ್ಮಾಣಕ್ಕೆ ನೀಡಲಾ ಗುವುದು. ಅಲ್ಲಿ ಫಿಲ್ಮ್ ಸಿಟಿಗೆ ಸಂಪರ್ಕ ಕ್ಕೆ ಬೇಕಾದ ರಸ್ತೆಯೊಂದನ್ನು ಮಾಡಿ ಆ ಜಾಗವನ್ನು ಫಿಲ್ಮ್ ಸಿಟಿಗೆ ಹಸ್ತಾಂತರ ಮಾಡಲಾಗುವುದು ಎಂದರು.
