ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ : ಪರಿಶೀಲನೆ
14/08/2020

ಮಡಿಕೇರಿ ಆ. 14 : ಮಕ್ಕಂದೂರು ಸೇರಿದಂತೆ ವಿವಿಧ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಕ್ಕಂದೂರು, ಕಡಗದಾಳು, ಹೊದ್ದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನು ಮತ್ತು ಮನೆ ಹಾಗೂ ಸಾರ್ವಜನಿಕ ಸಂಪರ್ಕ ರಸ್ತೆಯನ್ನು ಅಧಿಕಾರಿಗಳೊಂದಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಪರಿಶೀಲಿಸಿದರು.

