ಸ್ವಯಂ ಉದ್ಯೋಗ ಸಾಲ ಯೋಜನೆ : ಅರ್ಜಿ ಸಲ್ಲಿಸಲು ಸೆ. 1 ರವರೆಗೆ ಅವಧಿ ವಿಸ್ತರಣೆ

14/08/2020

ಮಡಿಕೇರಿ ಆ.14 : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ಮೂಲಕ 2020-21 ನೇ ಸಾಲಿನಲ್ಲಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ/ ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ ಉದ್ಯಮಶೀಲತಾ ತರಬೇತಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ನಿಗದಿತ ನಮೂನೆಯಲ್ಲಿ ಆನ್‍ಲೈನ್/ ಆಫ್‍ಲೈನ್(Online/Offline) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿಗಳನ್ನು ನಿಗಮದ ವೆಬ್‍ಸೈಟ್ ವಿಳಾಸ https://ambigaradevelopment.karnataka.gov.in ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಸಹ ಸಲ್ಲಿಸಬಹುದು. ಅರ್ಜಿಯಲ್ಲಿ ನಮೂದಿಸಿರುವಂತಹ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 01 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿದಾರರು ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ ಜಾತಿಗೆ ಸೇರಿದವರಾಗಿರಬೇಕು.
ಸರ್ಕಾರದ/ ಯಾವುದಾದರೂ ನಿಗಮಗಳ ಯೋಜನೆಯಡಿಯಲ್ಲಿ ಕುಟುಂಬದ ಯಾರೇ ಆಗಲಿ ಈಗಾಗಲೇ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನವರಿಗೆ ಸೌಲಭ್ಯ ಒದಗಿಸಲಾಗುವುದಿಲ್ಲ.
ಈ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಈ ಸಮುದಾಯಗಳ ಫಲಾಪೇಕ್ಷಿಗಳು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಡಿಕೇರಿ ಇಲ್ಲಿ ಉಚಿತವಾಗಿ ಸಂಬಂಧಿಸಿದ ಯೋಜನೆಯ ಅರ್ಜಿಗಳನ್ನು ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್, 01 ರ ಸಂಜೆ 4.30 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ದೂ.ಸಂ: 08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.