ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

14/08/2020

ಮಡಿಕೇರಿ ಆ.14 : ಪ್ರಸಕ್ತ(2020) ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಯಿಂದ ಪಡೆಯಬಹುದಾಗಿದೆ. ಅಥವಾ ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿ ವೆಬ್‍ಸೈಟ್ ನಿಂದ ಪಡೆದು ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರ ವ್ಯಕ್ತಿಗಳ/ ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆಗಳೊಂದಿಗೆ ಹಾಗೂ ಡ್ರಾಪ್ಟ್ ಸೈಟೆಷನ್ (1 ಪುಟಕ್ಕೆ ಮೀರದಂತೆ) 3 ಪ್ರತಿಗಳಲ್ಲಿ (ತ್ರಿಪ್ರತಿಗಳು) ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ದಿನಾಂಕ:02-09-2020312ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ. 08272-295829ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಚಿದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.