ಶ್ರೀತಲಕಾವೇರಿ ಕ್ಷೇತ್ರದಲ್ಲಿ ದೈನಂದಿನ ಪೂಜಾ ಕಾರ್ಯಗಳಿಗೆ ಚಾಲನೆ

August 14, 2020

ಮಡಿಕೇರಿ ಆ.14 : ಬೆಟ್ಟ ಕುಸಿದು ದುರಂತ ಸಂಭವಿಸಿದ್ದ ತಲಕಾವೇರಿಯಲ್ಲಿ ಎಂಟು ದಿನಗಳ ನಂತರ ನಿತ್ಯ ಪೂಜೆಗೆ ಚಾಲನೆ ನೀಡಲಾಗಿದೆ. ಭೂಕುಸಿತದ ಪರಿಣಾಮ ದೇವಾಲಯದ ಮಾರ್ಗ ಮುಚ್ಚಿ ಹೋಗಿ ಶ್ರೀತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡಚಣೆಯುಂಟಾಗಿತ್ತು.
ಕ್ಷೇತ್ರದ ತಂತ್ರಿಯವರಾದ ಎಚ್ಚಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಮತ್ತು ತಂಡದವರು ದೇವಾಲದಯದಲ್ಲಿ ಪುಣ್ಯಾಹ, ಗಣಹೋಮ, ರುದ್ರಾಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಪೂಜಾ ಕಾರ್ಯವನ್ನು ನೆರವೇರಿಸಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಆರಂಭಿಸಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕÀ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ದೇವಾಲಯ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಭಕ್ತ ಸಮೂಹ ಪೂಜೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!