ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆ

15/08/2020

ಮಡಿಕೇರಿ ಆ. 15 : ಕೊಡಗು ಜಿಲ್ಲಾಡಳಿತದಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ನಡೆಯಿತು.
ನಗರದ ಕೋಟೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ, ವೀಣಾಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ. ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ , ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ ಸೇರಿದಂತೆ ಮತ್ತಿತರರು ಹಾಜರಿದ್ದರು.