ಕಾಂಗ್ರೆಸ್ ವಿರುದ್ಧ ವಿಶ್ವನಾಥ್ ಟೀಕೆ

15/08/2020

ಮೈಸೂರು ಆ.15 : ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ಪಾಪದ ಕೂಸು. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಾಕಲು ಕಾಂಗ್ರೆಸ್ ನಾಯಕರೇ ಕಾರಣ. ಘಟನೆಯಲ್ಲಿ ರಾಜಕೀಯ ಮೇಲಾಟಗಳು ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಅಲ್ಲಿನ ಸಂಘಟನೆಗಳ ಮಧ್ಯೆ ರಾಜಕೀಯ ಇದೆ. ಬಿಜೆಪಿಗೂ ಈ ಘಟನೆಗೆ ಯಾವುದೇ ಸಂಬಂಧವಿಲ್ಲ. ಇದರಲ್ಲಿ ಬಿಜೆಪಿಯವರು ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಕಿ ಬಿದ್ದ ಮನೆಗೆ ಹೋಗಿ ಸಾಂತ್ವನ ಹೇಳಲಿಲ್ಲಿ. ಬದಲಾಗಿ ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ಗಲಾಟೆಯಲ್ಲಿ ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದವರನ್ನ ಮಾಲೆ ಹಾಕಿ ಸ್ವಾಗತಿ ಸಿದರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಜೈಲಿಗೆ ಹೋಗಿದ್ರಾ ಎಂದು ಅವರು ಜಮೀರ್ ಅಹಮದ್ ಗೆ ಪ್ರಶ್ನೆ ಮಾಡಿದ್ದಾರೆ.