ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ 74 ನೇ ಸ್ವಾತಂತ್ರ್ಯ ದಿನಾಚರಣೆ

15/08/2020

ಮಡಿಕೇರಿ ಆ. 15 : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಕೆ. ಮಂಜುನಾಥ್ ಕುಮಾರ್, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಅನೇಕ ಕಾಂಗ್ರೆಸ್ ನಾಯಕರುಗಳ ತ್ಯಾಗ ಬಲಿದಾನ ಮತ್ತು ಹೋರಾಟಗಳಿಂದ ಈ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಭಾರತ ಸ್ವಾವಲಂಬಿ ದೇಶವಾಗಿ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ವ ಎಂದು ಬಣ್ಣಿಸಿದರು.
ಕೆಪಿಸಿಸಿ ಮುಖಂಡರು, ಕೊಡಗು ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಪಿ. ಚಂದ್ರಕಲಾ, ಹಿರಿಯ ಮುಖಂಡÀ ಟಿ. ಪಿ. ರಮೇಶ್, ಟಿ. ಎಂ. ಅಯ್ಯಪ್ಪ ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ. ಎ. ಉಸ್ಮಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಪಿ. ಸುರೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಡಿಸಿಸಿ ವಕ್ತಾರ ಟಿ. ಇ. ಸುರೇಶ್, ಸೇವಾದಳದ ಬ್ಲಾಕ್ ಅಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ರಾಜ್ಯ ಪಧಾದಿಕಾರಿ ಎಂ. ಎ. ಉಸ್ಮಾನ್, ಡಿ.ಸಿ.ಸಿ ಸದಸ್ಯೆ ಗೀತಾ ಧರ್ಮಪ್ಪ, ಯುವಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಮಹಿಳಾ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಮಿನಾಜ್ ಪ್ರವೀಣ್, ಎಸ್. ಸಿ. ಘಟಕದ ನಗರಾಧ್ಯಕ್ಷ ಮುದ್ದುರಾಜ್, ಪ್ರಮುಖರಾದ ಕೆ. ಎ. ಬಾವ, ಮಮ್ತಾಜ್ ಬೇಗಂ, ಟಿ. ಪಿ. ನಾಣಯ್ಯ, ಮುನೀರ್ ಮಾಚರ್, ಶೇಕ್ ಅಹಮದ್, ರಿಯಾಜ್, ಕೆ. ಬಿ. ಈರಪ್ಪ, ಇಸ್ಮಾಯಿಲ್, ಸಬಾಷ್ಟಿನ್, ರಾಣಿ, ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.