ಕಲ್ಲುಮೊಟ್ಟೆ ಅಂಬೇಡ್ಕರ್ ಯುವಕ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

15/08/2020

ಮಡಿಕೇರಿ ಆ. 15 : ಅಂಬೇಡ್ಕರ್ ಯುವಕ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಕಲ್ಲು ಮೊಟ್ಟೆ (ಆದರ್ಶನಗರ) ಸಮುದಾಯ ಭವನದಲ್ಲಿ ಆಚರಿಸಲಾಯಿತು. ಗ್ರಾ.ಪಂ ಮಾಜಿ ಸದಸ್ಯರಾದ ಸುಶೀಲಮ್ಮ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಂತರ ನಡೆದ ಸಭೆಯಲ್ಲಿ ಅಂಬೇಡ್ಕರ್ ಯುವಕ ಸಂಘದ ನಿರ್ದೇಶಕ ಬಶೀರ್ ಅಲಿ ಅವರು ಮಾತನಾಡಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಕರೆ ನೀಡಿದರು. ಊರಿನಲ್ಲಿರುವ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದೆಂದು ತಿಳಿಸಿದರು.

ಇದೇ ಸಂದರ್ಭ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಘದ ಅಧ್ಯಕ್ಷ ಎಂ.ಎಂ. ಸೀನ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಆಸಿಫ್ ಅಲಿ, ಸಹಕಾರ್ಯದರ್ಶಿ ಜಮಾಲ್, ಸದಸ್ಯ ಅಜೀಜ್ ಹಾಗೂ ಪ್ರಮುಖರಾದ ಆಶಾಲತ ಉಪಸ್ಥಿತರಿದ್ದರು.