ಕಡಂಗ ಆಟೋ ಸಂಘದಿಂದ 74ನೇ ಸ್ವಾತಂತ್ರ್ಯ ದಿನ ಆಚರಣೆ

15/08/2020

ಮಡಿಕೇರಿ ಆ. 15 : ಕಡಂಗ ಆಟೋ ಸಂಘದ ವತಿಯಿಂದ 74ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಟೋ ನಿಲ್ದಾಣದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಚೋಳಂಡ ಸುಗುಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಧ್ವಜಾರೋಹಣ ಮಾಡಿದರು. ವಿಎಸ್ಎಸ್ ಎನ್ ಅಧ್ಯಕ್ಷ ಕೋಡಿರ ಪ್ರಸನ್ನ ತಮ್ಮಯ್ಯ ಅವರು ಮಾತನಾಡಿ ಭಾರತ ದೇಶ ಆಧುನಿಕತೆಯೊಂದಿಗೆ ಪ್ರಗತಿ ಸಾಧಿಸುತ್ತಿದೆ ಎಂದರು.