ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

August 15, 2020

ಮಡಿಕೇರಿ ಆ. 15 : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಪ್ರತಿಯೊಬ್ಬರು ದೇಶಭಕ್ತಿಯನ್ನು ಮೂಡಿಸಿಕೊಂಡು ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕೆಂದರು. ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

error: Content is protected !!