ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

August 15, 2020

ಮಡಿಕೇರಿ ಆ. 15 : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ವತಿಯಿಂದ ಬ್ಯಾಂಕ್ ಆವರಣದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬ್ಯಾಂಕ್ ಅಧ್ಯಕ್ಷ ಬಿ.ಬಿ.ಬಾಲಕೃಷ್ಣ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿದರು. ಉಪಾಧ್ಯಕ್ಷ ಬಿ.ಎಂ.ರಾಜೇಶ್ ಹಾಗೂ ನಿರ್ದೇಶಕರುಗಳು, ಸದಸ್ಯರು, ಸಿಬ್ಬಂದಿ ವರ್ಗ ಹಾಜರಿದ್ದರು.
ದೇಶಭಕ್ತಿ ಗೀತೆಯ ನಂತರ ಸಿಹಿ ಹಂಚಲಾಯಿತು.

error: Content is protected !!