ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ

August 15, 2020

ಮಡಿಕೇರಿ ಆ. 15 : ಕೊಡಗು ಪೊಲೀಸ್ ಇಲಾಖೆ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಕೇಂದ್ರ ಸ್ಥಾನದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಮತ್ತು ಕಛೇರಿಗಳ ಆವರಣದಲ್ಲಿ ಕೂಡ ಧ್ವಜಾರೋಹಣ ಮಾಡಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.