ಮಡಿಕೇರಿ ನಗರ ಬಿಜೆಪಿ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ

15/08/2020

ಮಡಿಕೇರಿ ಆ. 15 : ಮಡಿಕೇರಿ ನಗರ ಬಿಜೆಪಿ ಘಟಕದ ವತಿಯಿಂದ ನಗರದ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಬಿಜೆಪಿ ನಗರಾಧ್ಯಕ್ಷ ಮನು ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಪಕ್ಷದ ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾ ಕಾರ್ಯದರ್ಶಿ ಸತೀಶ್, ಹಿಂದುಳಿದ ಮೋರ್ಚಾದ ನಗರಾಧ್ಯಕ್ಷ ಬಿ.ಎಂ.ರಾಜೇಶ್ ಮತ್ತಿತರರು ಹಾಜರಿದ್ದರು.