ಮಡಿಕೇರಿ ಆಕಾಶವಾಣಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ : ಸಾಧಕರಿಗೆ ಸನ್ಮಾನ

August 15, 2020

ಮಡಿಕೇರಿ ಆ. 15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.
ಸಮಾರಂಭದ ಪ್ರಯುಕ್ತ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಮತ್ತು ಪ್ರಸಾರ ನಿರ್ವಾಹಕ ಬಿ. ದಿಗ್ವಿಜಯ್ ಅವರನ್ನು ಶಾಲು ಹೊದಿಸಿ, ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ನಿರ್ವಾಹಕ ಡಾ.ವಿಜಯ ಅಂಗಡಿ, ಹಿರಿಯ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ, ಇಂಜಿನಿಯರಿಂಗ್ ವಿಭಾಗದ ರೆಂಜಿತ್, ಸಂತೋಷ್, ಲೋಕೇಶ್, ಆಡಳಿತ ವಿಭಾಗದ ನಾರಾಯಣ್, ಚಂದ್ರ, ರಾಮಾ ನಾಯಾಕ್, ನಿಲಯದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!