ಸೋಮವಾರಪೇಟೆ ಆಟೋ ಚಾಲಕರಿಂದ ಸ್ವಾತಂತ್ರ್ಯ ದಿನಾಚರಣೆ

15/08/2020

ಮಡಿಕೇರಿ ಆ.15 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆಟೋ ನಿಲ್ದಾಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಆರ್. ಮೋಹನ್ ಧ್ವಜಾರೋಹಣ ನೆರವೇರಿಸಿದರು. ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ನ ಅಧ್ಯಕ್ಷೆ ಕವಿತ ವಿರೂಪಾಕ್ಷ ಮತ್ತು ಪದಾಧಿಕಾರಿಗಳಿ ಇದ್ದರು. ಆಟೋ ಚಾಲಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ಸಂಘದ ಕಾರ್ಯದರ್ಶಿ ಎಚ್. ಕೆ. ಗಂಗಾಧರ್. ಸಹಕಾರ್ಯದರ್ಶಿ ಬಿ. ಎಸ್. ಜನಾರ್ದನ್ ಇದ್ದರು.